ನಾಳೆಯಿಂದ ಹೊಸ ಸರ್ಕಾರ ನೂತನ ಮುಖ್ಯಮಂತ್ರಿ ಯಾಗಿ ಶ್ರೀ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಶ್ರೀ ಡಿ. ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ…

admin
1 Min Read

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಅತಿಗಣ್ಯ ಮತ್ತು ಇತರೆ ಗಣ್ಯವ್ಯಕ್ತಿಗಳಿಗೆ ಆಹ್ವಾನ ನೀಡಲಾಗಿದೆನಾಳೆ ಮಧ್ಯಾಹ್ನ 12.30 ಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಯಾರಿಗೆಲ್ಲ ಆಹ್ವಾನ?

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸಗಢದ ಮುಖ್ಯಮಂತ್ರಿ ಭೂಪೇಶ್ ಬಗೇಲ್, ಬಿಹಾರ್‌ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು, ಪುದಿಚೆರಿ ಸಿಎಂ ಎನ್.ರಂಗಸ್ವಾಮಿ, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರನ್ನು ಆಹ್ವಾನಿಸಲಾಗಿದೆ.

Share this Article
Leave a comment